Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:17 - ಪರಿಶುದ್ದ ಬೈಬಲ್‌

17 ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:17
8 ತಿಳಿವುಗಳ ಹೋಲಿಕೆ  

ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ನಿನೆವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ.


ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.


ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.


ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು