Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:3 - ಪರಿಶುದ್ದ ಬೈಬಲ್‌

3 ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:3
35 ತಿಳಿವುಗಳ ಹೋಲಿಕೆ  

ಮೇಯರ್ಕೋನ್ ಮತ್ತು ರಕ್ಕೋನ್, ಯೊಪ್ಪಕ್ಕೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು.


ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಹಡಗುಗಳೇ, ನೀವು ತಾರ್ಷೀಷಿಗೆ ಹಿಂದಿರುಗಿರಿ! ಸಮುದ್ರ ತೀರದಲ್ಲಿ ವಾಸಿಸುವವರಾದ ನೀವು ದುಃಖಿಸಬೇಕು!


ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.


ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.


“‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು.


ತಾರ್ಷೀಷಿನ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ನದಿಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು.


ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.


ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು.


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.


ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು.


ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.


ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.


“ನೀನು ನನ್ನ ಸೇವಕರಿಗೆ ಆಹಾರವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೊಡುವ ಭರವಸೆ ನೀಡಿರುವೆ. ಆದ್ದರಿಂದ ದಯವಿಟ್ಟು ಇವುಗಳನ್ನು ಒದಗಿಸಿಕೊಡು.


ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.


“ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು