Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:4 - ಪರಿಶುದ್ದ ಬೈಬಲ್‌

4 ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:4
13 ತಿಳಿವುಗಳ ಹೋಲಿಕೆ  

ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.


ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು.


ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.


ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.


ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.


ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.


ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು