5 ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.
5 ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
5 ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು.
5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.
ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.
ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.
ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.
ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.
ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.