ಯೋನನು 2:2 - ಪರಿಶುದ್ದ ಬೈಬಲ್2 “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”