Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:3 - ಪರಿಶುದ್ದ ಬೈಬಲ್‌

3 “ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:3
11 ತಿಳಿವುಗಳ ಹೋಲಿಕೆ  

ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.


ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.


ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.


ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.


ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು