Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:6 - ಪರಿಶುದ್ದ ಬೈಬಲ್‌

6 ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪರ್ವತಗಳ ಬುಡದ ತನಕ ಇಳಿದೆನು, ಭೂಲೋಕದ ಅಗುಳಿಗಳು ಎಂದಿಗೂ ತೆಗೆಯದ ಹಾಗೆ ನನ್ನ ಹಿಂದೆ ಹಾಕಲ್ಪಟ್ಟವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:6
25 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.


ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು.


ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು.


ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.


ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.


ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.


ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.


“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”


ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು