ಯೋನನು 2:8 - ಪರಿಶುದ್ದ ಬೈಬಲ್8 “ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು. ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.