Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:9 - ಪರಿಶುದ್ದ ಬೈಬಲ್‌

9 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:9
24 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.


ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.


ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.


ನಾಲ್ಕು ವರ್ಷಗಳ ಬಳಿಕ ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.


ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು