Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:10 - ಪರಿಶುದ್ದ ಬೈಬಲ್‌

10 ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:10
18 ತಿಳಿವುಗಳ ಹೋಲಿಕೆ  

ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.


“ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ.


ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.


ಆಗ ಯೆಹೋವನು ತನ್ನ ನಿರ್ಧಾರವನ್ನು ಬದಲಿಸಿ ಹೀಗೆಂದನು, “ಅದು ನೆರವೇರುವುದಿಲ್ಲ.”


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”


‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು