ಯೋನನು 3:2 - ಪರಿಶುದ್ದ ಬೈಬಲ್2 “ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.