Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:3 - ಪರಿಶುದ್ದ ಬೈಬಲ್‌

3 ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:3
9 ತಿಳಿವುಗಳ ಹೋಲಿಕೆ  

ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.


ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.


ಲೂಕನೊಬ್ಬನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ನೀನು ಬರುವಾಗ ಮಾರ್ಕನನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಬಾ. ಅವನು ನನ್ನ ಸೇವೆಗೆ ಸಹಾಯ ಮಾಡಬಲ್ಲನು.


ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು