ಯೋನನು 3:4 - ಪರಿಶುದ್ದ ಬೈಬಲ್4 ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿ |