ಯೋನನು 3:5 - ಪರಿಶುದ್ದ ಬೈಬಲ್5 ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು. ಅಧ್ಯಾಯವನ್ನು ನೋಡಿ |
ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.