ಯೋನನು 3:6 - ಪರಿಶುದ್ದ ಬೈಬಲ್6 ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.