ಯೋನನು 3:8 - ಪರಿಶುದ್ದ ಬೈಬಲ್8 ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ. ಅಧ್ಯಾಯವನ್ನು ನೋಡಿ |
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.