ಯೋನನು 3:9 - ಪರಿಶುದ್ದ ಬೈಬಲ್9 ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?” ಅಧ್ಯಾಯವನ್ನು ನೋಡಿ |
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.