Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:1 - ಪರಿಶುದ್ದ ಬೈಬಲ್‌

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:1
34 ತಿಳಿವುಗಳ ಹೋಲಿಕೆ  

ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.


ಶೇಮನ ಗಂಡುಮಕ್ಕಳು ಯಾರೆಂದರೆ: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್. ಅರಾಮನ ಮಕ್ಕಳು ಯಾರೆಂದರೆ: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು.


ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ನಿಮ್ಮ ದೇವರಾದ ಯೆಹೋವನಿಗೆ ನೀವು ನಂಬಿಗಸ್ತರಾಗಿರಬೇಕು.


ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.


ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು