ಯೋಬ 1:11 - ಪರಿಶುದ್ದ ಬೈಬಲ್11 ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು. ಅಧ್ಯಾಯವನ್ನು ನೋಡಿ |
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.