ಯೋಬ 1:12 - ಪರಿಶುದ್ದ ಬೈಬಲ್12 ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿ |
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.