Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:13 - ಪರಿಶುದ್ದ ಬೈಬಲ್‌

13 ಒಂದು ದಿನ, ಯೋಬನ ಗಂಡುಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಒಂದಾನೊಂದು ದಿವಸದಲ್ಲಿ ಯೋಬನ ಗಂಡು ಹೆಣ್ಣುಮಕ್ಕಳು ಹಿರಿಯವನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಒಂದು ದಿನ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತಾ ಔತಣಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:13
8 ತಿಳಿವುಗಳ ಹೋಲಿಕೆ  

“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.


ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.


ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.


ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು