ಯೋಬ 1:15 - ಪರಿಶುದ್ದ ಬೈಬಲ್15 ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.