Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:16 - ಪರಿಶುದ್ದ ಬೈಬಲ್‌

16 ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಮಾತಾಡುತ್ತಿರುವಾಗಲೇ ಮತ್ತೊಬ್ಬನು ಬಂದು ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:16
13 ತಿಳಿವುಗಳ ಹೋಲಿಕೆ  

ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.


ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು