ಯೋಬ 1:19 - ಪರಿಶುದ್ದ ಬೈಬಲ್19 ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.