5 ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
5 ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
5 ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
5 ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.
5 ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.
ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.
ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.
ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.
ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”
ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.
ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.
ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.
ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.
ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.