Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:8 - ಪರಿಶುದ್ದ ಬೈಬಲ್‌

8 ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:8
29 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ನೀನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.


ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


“ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.


ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು