ಯೋಬ 10:21 - ಪರಿಶುದ್ದ ಬೈಬಲ್21 ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಅಂಧಕಾರದಿಂದಲೂ ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರಿಗಿ ಬರಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.