Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:6 - ಪರಿಶುದ್ದ ಬೈಬಲ್‌

6 ನೀನು ನನ್ನ ತಪ್ಪಿಗಾಗಿ ನೋಡುವೆ; ನನ್ನ ಪಾಪಕ್ಕಾಗಿ ಅವಸರದಿಂದ ಹುಡುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ, ನನ್ನ ಪಾಪವನ್ನು ವಿಚಾರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು [ಇಷ್ಟು ಅವಸರದಿಂದ] ನನ್ನ ದೋಷವನ್ನು ಹುಡುಕಿ ನನ್ನ ಪಾಪವನ್ನು ವಿಚಾರಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ; ಹೌದು, ನನ್ನ ಪಾಪವನ್ನು ವಿಚಾರಿಸುವ ನಿಮಗೇ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:6
13 ತಿಳಿವುಗಳ ಹೋಲಿಕೆ  

“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.


ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!


ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನೀನು ನನ್ನ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?


ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.


“ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.


ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು