ಯೋಬ 10:7 - ಪರಿಶುದ್ದ ಬೈಬಲ್7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ? ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.