ಯೋಬ 11:14 - ಪರಿಶುದ್ದ ಬೈಬಲ್14 ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ, ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.