ಯೋಬ 11:2 - ಪರಿಶುದ್ದ ಬೈಬಲ್2 “ಮಾತುಗಳ ಈ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ? ಅಧ್ಯಾಯವನ್ನು ನೋಡಿ |
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.