ಯೋಬ 12:10 - ಪರಿಶುದ್ದ ಬೈಬಲ್10 ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ. ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.