Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:6 - ಪರಿಶುದ್ದ ಬೈಬಲ್‌

6 ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:6
17 ತಿಳಿವುಗಳ ಹೋಲಿಕೆ  

ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?


ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.


ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.


ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ.


ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿ ಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.


“ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು