Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:10 - ಪರಿಶುದ್ದ ಬೈಬಲ್‌

10 ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ರಹಸ್ಯವಾಗಿ ಪಕ್ಷಪಾತಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:10
8 ತಿಳಿವುಗಳ ಹೋಲಿಕೆ  

ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.


ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”


ನೀವು ದೇವರಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ನ್ಯಾಯಾಲಯದಲ್ಲಿ ಆತನಿಗಾಗಿ ವಾದಿಸಲು ಹೋಗುವಿರಾ?


ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು