Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:14 - ಪರಿಶುದ್ದ ಬೈಬಲ್‌

14 ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಾಣವನ್ನು ನಾನು ಕಚ್ಚಿಕೊಂಡಿದ್ದೇನೆ ಬಾಯಲಿ ಜೀವವನ್ನು ನಾನು ಹಿಡಿದುಕೊಂಡಿದ್ದೇನೆ ಕೈಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:14
8 ತಿಳಿವುಗಳ ಹೋಲಿಕೆ  

ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”


ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ?


ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು