ಯೋಬ 13:19 - ಪರಿಶುದ್ದ ಬೈಬಲ್19 ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.