Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:28 - ಪರಿಶುದ್ದ ಬೈಬಲ್‌

28 ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ ನುಸಿಹಿಡಿದ ಬಟ್ಟೆಯ ಚೂರಿನಂತೆಯೂ ಕ್ಷಯಿಸಿಹೋಗುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕೊಳೆಯುವ ಪದಾರ್ಥದಂತೆಯೂ ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:28
12 ತಿಳಿವುಗಳ ಹೋಲಿಕೆ  

ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.


ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು.


ನಿಮ್ಮ ಶ್ರೀಮಂತಿಕೆಯು ಕೊಳೆತುಹೋಗುತ್ತದೆ ಮತ್ತು ಬೆಲೆಯಿಲ್ಲದಂತಾಗುತ್ತದೆ. ನಿಮ್ಮ ಬಟ್ಟೆಗಳನ್ನು ನುಸಿಗಳು ತಿಂದುಹಾಕುತ್ತವೆ.


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ನಾನು ಸಮಾಧಿಗೆ, ‘ನೀನೇ ನನ್ನ ತಂದೆ’ಯೆಂದು ಹುಳವಿಗೆ, ‘ನೀನೇ ನನ್ನ ತಾಯಿ, ನೀನೇ ನನ್ನ ತಂಗಿ’ ಎಂದು ಹೇಳುವುದಾದರೆ,


ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.


ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿಹೋಗಿದೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು