ಯೋಬ 13:4 - ಪರಿಶುದ್ದ ಬೈಬಲ್4 ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.