Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:5 - ಪರಿಶುದ್ದ ಬೈಬಲ್‌

5 ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. ನೀವು ಮಾಡಬಹುದಾದ ಜ್ಞಾನದ ಕಾರ್ಯ ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಸುಮ್ಮನಿದ್ದರೆ ಚೆನ್ನ ಮೌನವೇ ನಿಮಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:5
14 ತಿಳಿವುಗಳ ಹೋಲಿಕೆ  

ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.


“ಸುಮ್ಮನಿರಿ, ಮಾತಾಡಲು ನನಗೆ ಅವಕಾಶ ಕೊಡಿ! ನನಗೆ ಏನಾಗಬೇಕೋ ಆಗಲಿ.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”


ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನ್ನು ಜಜ್ಜುವಿರಿ?


“ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ.


ನಿಮ್ಮ ಒಣಮಾತುಗಳಿಗೆ ಕೊನೆಯಿಲ್ಲವೇ? ನೀವು ವಾದ ಮಾಡುತ್ತಲೇ ಇರುವುದೇಕೆ?


ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ?


“ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ.


ನನ್ನನ್ನು ನೋಡಿ ಬೆರಗಾಗಿ ನಿಮ್ಮ ಬಾಯಿಯ ಮೇಲೆ ಕೈಯಿಟ್ಟುಕೊಳ್ಳಿರಿ, ಗಾಬರಿಯಿಂದ ನನ್ನನ್ನೇ ದೃಷ್ಟಿಸಿ ನೋಡಿರಿ!


ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು