Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:8 - ಪರಿಶುದ್ದ ಬೈಬಲ್‌

8 ನೀವು ದೇವರಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ನ್ಯಾಯಾಲಯದಲ್ಲಿ ಆತನಿಗಾಗಿ ವಾದಿಸಲು ಹೋಗುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:8
7 ತಿಳಿವುಗಳ ಹೋಲಿಕೆ  

ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.


“ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು