ಯೋಬ 14:12 - ಪರಿಶುದ್ದ ಬೈಬಲ್12 ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.