ಯೋಬ 14:5 - ಪರಿಶುದ್ದ ಬೈಬಲ್5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.