Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:6 - ಪರಿಶುದ್ದ ಬೈಬಲ್‌

6 ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂತಿರಲು ತಿರುಗಿಸಿಬಿಡು ಅವನಿಂದ ನಿನ್ನ ದೃಷ್ಟಿಯನು ಸವಿಯಲು ಬಿಡು ಕೂಲಿಯಾಳಂತೆ ದಿನಾಂತ್ಯದ ನಲಿವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:6
8 ತಿಳಿವುಗಳ ಹೋಲಿಕೆ  

ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು!


ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!


“ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸ ಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು