Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:19 - ಪರಿಶುದ್ದ ಬೈಬಲ್‌

19 ಅವರು ಮಾತ್ರ ತಮ್ಮ ದೇಶದಲ್ಲಿ ವಾಸಿಸಿದರು. ಅವರ ಮಧ್ಯದಲ್ಲಿ ಯಾವ ವಿದೇಶಿಯನೂ ಹಾದುಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲ ಪರದೇಶೀಯರು ಅವರ ಮಧ್ಯೆ ಹಾದುಹೋಗುವಂತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದೇ ಸಂಗತಿಯನ್ನು ತಮ್ಮ ಪಿತೃಗಳಿಂದ ಕೇಳಿ ಮರೆಮಾಜದೆ ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರಿಗೆ ದೇಶವು ಕೊಡಲಾಗಿತ್ತು; ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:19
7 ತಿಳಿವುಗಳ ಹೋಲಿಕೆ  

“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.


ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.


ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ.


ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು.


ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು