ಯೋಬ 16:4 - ಪರಿಶುದ್ದ ಬೈಬಲ್4 ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನೂ ನಿಮ್ಮ ಹಾಗೆ ಮಾತಾಡಬಲ್ಲೆನು; ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ ನಾನು ನಿಮಗೆ ವಿರುದ್ಧವಾಗಿ ಮಾತುಗಳನ್ನು ಹೊಸೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.