Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:7 - ಪರಿಶುದ್ದ ಬೈಬಲ್‌

7 ನನ್ನ ಕಣ್ಣುಗಳು ಕುರುಡಾಗಿವೆ, ನಾನು ಬಹು ದುಃಖಿತನಾಗಿದ್ದೇನೆ. ಅತ್ಯಧಿಕವಾದ ನೋವಿನಲ್ಲಿದ್ದೇನೆ; ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರಕರೆಯಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ [ನಿಸ್ಸಾರ] ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:7
10 ತಿಳಿವುಗಳ ಹೋಲಿಕೆ  

ಅತ್ತತ್ತು ನನ್ನ ಮುಖವು ಕೆಂಪಾಗಿದೆ, ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕಪ್ಪಾಗಿದೆ.


ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.


ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.


ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಾಗಿದ್ದೇನೆ.


ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.


ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ. ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರುನೋಡುತ್ತಿದೆ.


ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿಹೋಗಿದೆ.


ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು