Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:14 - ಪರಿಶುದ್ದ ಬೈಬಲ್‌

14 ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:14
16 ತಿಳಿವುಗಳ ಹೋಲಿಕೆ  

ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ.


ಅತ್ಯಂತ ಗರ್ವಿಷ್ಠ ಪ್ರಾಣಿಗಳನ್ನೂ ಅದು ಕಡೆಗಣಿಸುವುದು. ಅದು ಕ್ರೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.”


ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.”


ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.


ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.


ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು