Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:20 - ಪರಿಶುದ್ದ ಬೈಬಲ್‌

20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:20
13 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ಆದರೆ ದೇವರು ತನ್ನ ಶಕ್ತಿಯಿಂದ ಬಲಿಷ್ಠರನ್ನು ನಾಶಮಾಡುವನು; ದುಷ್ಟರು ಜೀವನದಲ್ಲಿ ಬೇರೂರಿಕೊಂಡಿದ್ದರೂ ತಮ್ಮ ಭವಿಷ್ಯತ್ತನ್ನು ತಿಳಿಯದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು