Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:19 - ಪರಿಶುದ್ದ ಬೈಬಲ್‌

19 ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಆಪ್ತವಿುತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:19
12 ತಿಳಿವುಗಳ ಹೋಲಿಕೆ  

ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು.


ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.


ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.


ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.


ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.


ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದೊಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರೆನು.


ನೀವು ಸಹ ಆ ತೊರೆಗಳಂತಿದ್ದೀರಿ. ನೀವು ನನ್ನ ಕಷ್ಟಗಳನ್ನು ನೋಡಿ ಭಯಗೊಂಡಿದ್ದೀರಿ.


ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು