Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:22 - ಪರಿಶುದ್ದ ಬೈಬಲ್‌

22 ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ? ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ತಿಂದು ತಿಂದು ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? ನನಗೆ ತೊಂದರೆಪಡಿಸಿದ್ದು ಸಾಲದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:22
14 ತಿಳಿವುಗಳ ಹೋಲಿಕೆ  

ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.


ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.


ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?


ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.


“‘ನಾವು ಯೋಬನಿಗೆ ತೊಂದರೆ ಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು.


ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ. ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ.


ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು. ನಿನ್ನ ರಕ್ಷಣೆಯಲ್ಲಿ ಅವರಿಗೆ ಪಾಲುಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು